ಅರಕಲಗೂಡು: ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಮಾರ್ಚ್ 6ರಿಂದ ಕಾಂಗ್ರೆಸ್ ಪಕ್ಷ ರಾಜ್ಯಾಧ್ಯಂತ ಪ್ರತಿಭಟನೆ ನಡೆಸಲಿದೆ ಎಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಪಟ್ಟಣದಲ್ಲಿಂದು ಪತ್ರಿಕಾ ಗೋಷ್ಠಿ ನಡೆಸಿದ ಅವರು ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯಗಳು ಜನತೆಯ ಮೇಲೆ ಮಾರಕ ಪರಿಣಾಮ ಬೀರಿದೆ. ರೈತರ ಉಚಿತ ವಿದ್ಯುತ್ ನೀಡುತ್ತೇವೆಂದು ಹೇಳಿದ್ದ ಸರ್ಕಾರ ಈಗ ಕನಿಷ್ಠ ವಿದ್ಯುತ್ ಒದಗಿಸಲು ವಿಫಲವಾಗಿದೆ, ಇವರ ಆಡಳಿತದಿಂದ ಜನ ರೋಸಿ ಹೋಗಿದ್ದಾರೆ, ಬಿಜೆಪಿಯವರ ನಿಜ ಬಣ್ಣ ಬಯಲಾಗಿದೆ ಎಂದು ನುಡಿದ ಅವರು ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಮಾರ್ಚ್ 6ರಿಂದ ರಾಜ್ಯಾಧ್ಯಂತ ಪಕ್ಷದ ಕಾರ್ಯಕರ್ತರು ಸರಣಿ ಪ್ರತಿಭಟನೆ ನಡೆಸಲಿದ್ದಾರೆ ಎಂದರು. ಕಾಂಗ್ರೆಸ್ ಪಕ್ಷ್ದಕ್ಕೆ ಸಮುದಾಯು ಬೆಂಬಲವಿದೆ ಈ ನಿಟ್ಟಿನಲ್ಲಿ ಸಂಘಟನಾತ್ಮಕ ಬಲ ಹೆಚ್ಚಿಸಲು ನಿರ್ಧರಿಸಲಾಗಿದೆ.ಪಕ್ಷದಲ್ಲಿ ಯುವಕರಿಗೆ ಆದ್ಯತೆ ನೀಡಲಾಗುವುದು, ಆಂತರಿಕ ಪ್ರಜಾಜಾಪ್ರಭುತ್ವಕ್ಕೆ ಮನ್ನಣೆ ಕೊಡಲಾಗುವುದು, ಪ್ರಾಥಮಿಕ ಹಂತದಲ್ಲಿ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡಿ ಪಂಚಾಯತ್ ವಾರ್ಡ್ ಗಳಲ್ಲಿ ಪಕ್ಷದ ಪದಾಧಿಕಾರಿಗಳ ಸ್ಥಾನಕ್ಕೆ ಚುನಾವಣೆ ನಡೆಸಲಾಗುವುದು ಎಂದರು. ಕೇಂದ್ರ ಸರ್ಕಾರದ ಆಮ್ ಆದ್ಮಿ ಯೋಜನೆಯನ್ನು ಅನುಷ್ಠಾನಕ್ಕೆ ತರಲು ಯತ್ನಿಸಲಾಗುತ್ತಿದೆ, ಸರ್ಕಾರಿ ಯೋಜನೆಗಳ ಬಗ್ಗೆ ಅರಿವು ಮೂಡಿಸಿ ಜನರ ವಿಶ್ವಾಸ ಗಳಿಸಲು ಯತ್ನಿಸಲಾಗುತ್ತಿದೆ, ಯುವಕರು ಸ್ವಸಾಮರ್ಥ್ಯದಿಂದ ರಾಜಕೀಯಕ್ಕೆ ಧುಮುಕಬೇಕು. ಈ ಗಾಗಲೇ ರಾಷ್ಟ್ರಾಧ್ಯಂತ 2ಕೋಟಿ ಸದಸ್ಯತ್ವ ಮಾಡಿಸಲಾಗಿದೆ, ರಾಜ್ಯದಲ್ಲಿ ಯುವ ಕಾಂಗ್ರೆಸ್ ಗೆ 9ಲಕ್ಷ ಸದಸ್ಯತ್ವ ನೋಂದಣಿ ಮಾಡಿಸಲಾಗಿದೆ ಇನ್ನೂ ಹೆಚ್ಚಿನ ಸದಸ್ಯತ್ವಕ್ಕೆ ಪ್ರಯತ್ನಿಸಲಾಗುವುದು ಎಂದರು. ಗ್ರಾಮ ಪಂಚಾಯತ್ ಚುನಾವಣೆಗಳಲ್ಲಿ ಯಾವುದೇ ಪಕ್ಷ ಆಧಾರಿತ ಅಭ್ಯರ್ತಿಗಳರುವುದಿಲ್ಲ, ಆದರೂ ಪಂಚಾಯತ್ ಮಟ್ಟದಲ್ಲಿ ಯುವ ಕಾಂಗ್ರೆಸ್ಸಿಗರು ಕಣಕ್ಕೆ ಧುಮುಕುವಂತೆ ಪ್ರೋತ್ಸಾಹಿಸಲಾಗುವುದು ಯುವ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂದಿಯವರ ನಿರ್ದೇಶನದಲ್ಲಿ ಯುವ ಕಾಂಗ್ರೆಸ್ ಇನ್ನೂ ಹೆಚ್ಚಿನ ಶಕ್ತಿ ತುಂಬಿಕೊಳ್ಳಲಿದೆ, ಸಧ್ಯದಲ್ಲಿಯೇ ಜಿಲ್ಲೆಯಲ್ಲಿ ಗಮನ ಸೆಳೆಯುವ ಕಾರ್ಯಕ್ರಮದ ಮೂಲಕ ಪಕ್ಷದ ಬಲವರ್ಧನೆಗೆ ಶಕ್ತಿ ತುಂಬಲಾಗುವುದು ಎಂದರು. ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಹೆಂಟಗೆರೆ ಮಂಜುನಾಥ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಸನ್ನಕುಮಾರ್, ಮುಖಂಡರಾದ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.
ಶುಕ್ರವಾರ, ಫೆಬ್ರವರಿ 26, 2010
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ